ದೇವರಾಜ ಮಾರುಕಟ್ಟೆಯಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ

Spread the love

ಮೈಸೂರು: ಹಬ್ಬಗಳ ಹಿನ್ನೆಲೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಚಾಮುಂಡೇಶ್ವರಿ ಬಳಗದ ವತಿಯಿಂದ ನಗರದ ದೇವರಾಜ ಮಾರುಕಟ್ಟೆ ಮುಂಭಾಗ
ಬಟ್ಟೆ‌ಬ್ಯಾಗ್ ವಿತರಿಸಿ ಜಾಗೃತಿ ಮೂಡಿಸಲಾಯಿತು.

ಹಬ್ಬಗಳನ್ನು ಆಚರಿಸಲು ಮಾರ್ಕೆಟ್ ನಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಲು
ಬರುವಾಗ ಪ್ಲಾಸ್ಟಿಕ್ ಕವರ್ ತೊರೆದು ಬಟ್ಟೆ ಬ್ಯಾಗನ್ನು ಬಳಸುವಂತೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಚಾಮುಂಡೇಶ್ವರಿ ಯುವ ಬಳಗದ ಅಧ್ಯಕ್ಷ ನಜರ್ಬಾದ್ ನಟರಾಜ್,
ಹಿಂದಿನ ಕಾಲದಂತೆ ಈ ಕಾಲದಲ್ಲೂ ನಾವು ಬಟ್ಟೆಯಲ್ಲಿ ಹೆಣೆದ ಅಥವಾ ಬಟ್ಟೆಯ ಕೈ ಚೀಲಗಳನ್ನು ಹಿಡಿದು ಮಾರುಕಟ್ಟೆಗೆ ಹೋಗುವುದನ್ನು ರೂಢಿ ಮಾಡಿಕೊಳ್ಳುವ ಮೂಲಕ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು ಎಂದು ಸಲಹೆ ನೀಡಿದರು.

ಇಂದು ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಸಮತೋಲನಕ್ಕೆ ಧಕ್ಕೆಯಾಗುತ್ತಿದೆ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ವಿಷಾದಿಸಿದರು.

ಪ್ಲಾಸ್ಟಿಕ್ ಬ್ಯಾಗ್ ಬಳಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿವೆ,ಆದ್ದರಿಂದ ಬಟ್ಟೆ ಕೈ ಚೀಲಗಳನ್ನು ಬಳಕೆ ಮಾಡಿ ಪರಿಸರದ ಜತೆ ಜೀವ ವೈವಿದ್ಯತೆ ಸಂರಕ್ಷಿಸಲು ಜನರು ಮುಂದಾಗಬೇಕು ಎಂದು ನಜರ್ಬಾದ್ ನಟರಾಜ್ ಮನವಿ ಮಾಡಿದರು.

ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಎಸ್ ಎನ್ ರಾಜೇಶ್, ಗುರುರಾಜ್ ಶೆಟ್ಟಿ, ರವಿಚಂದ್ರ ಮತ್ತಿತರರು ಹಾಜರಿದ್ದರು.