ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ- ರಘುರಾಮ್ ವಾಜಪಾಯಿ

ಮೈಸೂರು,ಮಾ.3: ಗೋವಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನ ನೀಡಿದ್ದು, ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ ಹೇಳಿದರು

ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಮುಂಭಾಗ ಅರಿವು ಸಂಸ್ಥೆಯ 13ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಗೋವುಗಳಿಗೆ ಪೂಜೆ ಸಲ್ಲಿಸಿ ನಂತರ ಹಣ್ಣು, ಬೆಲ್ಲ ಹುಲ್ಲು ತಿನಿಸಿ ಗೋ ಸಂರಕ್ಷಣಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವದಲ್ಲಿ ಎಲ್ಲೂ ಇಲ್ಲದಷ್ಟು ಗೋ ಸಂತತಿ ನಮ್ಮ ದೇಶದಲ್ಲಿದ್ದು, ದೇಶದಲ್ಲಿ 30 ಸಾವಿರ ಕೋಟಿ ಗೋವುಗಳಿಗೆ ಆಶ್ರಯ ನೀಡುತ್ತಿದ್ದೇವೆ. ಅವುಗಳ ಸಂರಕ್ಷಣೆ ಮೊದಲ ಕರ್ತವ್ಯ ಆಗಬೇಕಾಗಿದೆ. ಗೋ ಸಂರಕ್ಷಣೆ ನಮ್ಮ ಸಂಸ್ಕೃತಿಯಾಗಿರುವುದರಿಂದಲೇ ಭಾರತದ ಸಂಸ್ಕೃತಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ,ಗೋವು ಉಳಿದರೆ ಭಾರತೀಯ ಸಂಸ್ಕೃತಿ ಉಳಿದಂತೆ,
ಗೋ ವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲಿ ಎಂದು ಮನವಿ ಮಾಡಿದರು.

ನಗರ ಪಾಲಿಕ‌ ಮಾಜಿ ಸದಸ್ಯ ಮ ವಿ ರಾಮಪ್ರಸಾದ್ ಮಾತನಾಡಿ,
ಗೋವಿನ ಹಾಲು ಸೇರಿದಂತೆ ಗೋ ಉತ್ಪನ್ನಗಳು ನಮ್ಮ ಶರೀರಕ್ಕೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ. ಆದ್ದರಿಂದ ಗೋವುಗಳಿಗೆ ನಾವು ವಿಶೇಷ ಆದ್ಯತೆ ನೀಡಬೇಕು ಎಂದು ಹೇಳಿದರು

ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್ ಮಾತನಾಡಿ,ಭಾರತದ ಸನಾತನ ಮೌಲ್ಯಗಳಿಗೆ ಜಗತ್ತು ತೆರೆದುಕೊಂಡಿದೆ. ಹಿಂದೆ ರಾಸಾಯನಿಕ ಗೊಬ್ಬರಗಳನ್ನು ಬಳಸಿ ಎಂದು ಬೋಧಿಸುತ್ತಿದ್ದವರು. ಈಗ ಸಾವಯವ ಗೊಬ್ಬರವನ್ನು ಬಳಸಿ ಎಂದು ಹೇಳುತ್ತಿದ್ದಾರೆ. ಇದಕ್ಕೆ ಗೋ ಮಾತೆಯ ಮಹತ್ವವೇ ಕಾರಣ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಶ್ಯಪ್, ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್,
ಜತ್ತಿ ಪ್ರಸಾದ್, ಶಿವು, ನಂದೀಶ್, ಅರುಣ್ ಕುಮಾರ್, ಕಿರಣ್, ರಾಕೇಶ್, ವಿನಯ್, ಮತ್ತಿತರರು ಹಾಜರಿದ್ದರು.