ಜಮ್ಮು: ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಮೂವರು ಯೋಧರು ಮೃತಪಟ್ಟ ಘಟನೆ
ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ನಲ್ಹಾದಲ್ಲಿ ನಡೆದಿದೆ.
ಈ ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 10.30ಕ್ಕೆ ಅಪಘಾತ ಸಂಭವಿಸಿದೆ. 23 ಮಂದಿ ಸಿಆರ್ಪಿಎಫ್ ಯೋಧರು ಬಸಂತ್ ಘರ್ನಿಂದ ವಾಪಸಾಗುತ್ತಿದ್ದರು.
ಜಮ್ಮು ಮತ್ತು ಕಾಶ್ಮೀರದವರೇ ಆಗಿರುವ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್, ಉಧಂಪುರ ಜಿಲ್ಲಾಧಿಕಾರಿಯಿಂದ ಈ ಬಗ್ಗೆ ಮಾಹಿತಿ ಪಡೆದಿದ್ದು, ಗಾಯಗೊಂಡ ಯೋಧರಿಗೆ ಎಲ್ಲ ರೀತಿಯ ಸಹಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
