ಸಿ.ಟಿ ರವಿಗೆ ಅನಾಮಧೇಯ ಕೊಲೆ ಬೆದರಿಕೆ ಪತ್ರ!

Spread the love

ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಹಾಗೂ ಅವರ ಮಗ ಸೂರ್ಯನಿಗೆ ಅನಾಮಧೇಯ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಪತ್ರ ಬಂದಿದೆ.

ಚಿಕ್ಕಮಗಳೂರಿನ ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ. ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ, ನಿನ್ನ ಮಗನನ್ನೂ ಸಾಯಿಸುತ್ತೇವೆ. ಹುಷಾರ್ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.