ಮೈಸೂರು: ಮಲೆ ಮಾದೇಶ್ವರ ಸಂಸ್ಥೆಯ ವತಿಯಿಂದ ಜೆಎಲ್ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಹಾಡು ಮತ್ತು ನೃತ್ಯ ಪ್ರತಿಭಾ ಪ್ರದರ್ಶನದಲ್ಲಿ ಚಿಣ್ಣರು ಮಿಂದೆದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಮಕ್ಕಳಲ್ಲಿರುವ ಕಲಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸಂಸ್ಕೃತಿ ಬಗ್ಗೆ ಅಭಿಮಾನವನ್ನು ಬೆಳೆಸುತ್ತವೆ ಎಂದು ತಿಳಿಸಿದರು.
ತೀರ್ಪುಗಾರರಾಗಿ ಭರತನಾಟ್ಯ ಶಿಕ್ಷಕಿ ಸುಮಿತ್ರ, ನಟಿ ಸ್ಮಿತಾ, ಮಲೆ ಮಾದೇಶ್ವರ ಸಂಸ್ಥೆಯ ಅಧ್ಯಕ್ಷ ಮಹಾನ್ ಶ್ರೇಯಸ್, ನೃತ್ಯ ಶಿಕ್ಷಕ ಗೋವಿಂದ್, ನಿರೂಪಕಿ ಜೋ ವಾಕ್ಸ್, ರಾಜೇಶ್, ಮನೋಜ್, ಚರಿತ್, ಧನಸ್ವಿ, ಚಿರಂತ್, ಈಶಾನಿ ಆರ್. ನೀಲಮನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಾಡು ಹಾಗೂ ನೃತ್ಯ ವಿಭಾಗಗಳಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮವು ಮಕ್ಕಳ ಕಲಾತ್ಮಕ ಪ್ರದರ್ಶನಗಳಿಂದ ರಂಗೇರಿದ್ದು, ಪೋಷಕರು ಹಾಗೂ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.
