ಬೆಂಗಳೂರು: ಬೆಂಗಳೂರಿನ ವಿಲ್ಸನ್ ಗಾರ್ಡನ್,ಚನ್ನಯ್ಯನ ಪಾಳ್ಯದಲ್ಲಿ ಶುಕ್ರವಾರ ಬೆಳಿಗ್ಗೆ ಸಿಲಿಂಡರ್ ಸ್ಫೋಟಗೊಂಡು ಮೂರ್ನಾಲ್ಕು ಮನೆಗಳು ಛಿದ್ರವಾಗಿದ್ದು, 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಈ ಘಟನೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದು,ಕೆಲ ಸಮತ ಆತಂಕದ ವಾತಾವರಣ ಉಂಟಾಗಿತ್ತು.
ಜನದಟ್ಟಣೆಯಿಂದ ಕೂಡಿದ ಚಿನ್ನಾಯನಪಾಳ್ಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸುಮಾರು ಆರು ಮನೆಗಳು ಹಾನಿಗೊಳಗಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಸೋರಿಕೆಯೇ ಸ್ಫೋಟಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಆದರೆ ನಿಖರವಾದ ಕಾರಣ ಇನ್ನೂ ಗೊತ್ತಾಗಬೇಕುದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.
ಸ್ಫೋಟ ಸಂಭವಿಸಿದ ಬಾಡಿಗೆ ಮನೆಯಲ್ಲಿ ಮೂರು ಸದಸ್ಯರ ಕುಟುಂಬ ವಾಸಿಸುತ್ತಿತ್ತು ಎಂದು ಪೊಲೀಸ್ ಆಯುಕ್ತರು ವರದಿಗಾರರಿಗೆ ತಿಳಿಸಿದರು.
ವಿಷಯ ಗೊತ್ತಾದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಕಳೆದುಕೊಂಡ ಕುಟುಂಬಕ್ಕೆ ಸಂತ್ವಾನ ಹೇಳಿದರು.
ಸಂತ್ರಸ್ತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಅವರು ಘೋಷಿಸಿದ್ದಾರೆ. ಇದಲ್ಲದೆ, ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಬೆಳಿಗ್ಗೆ 8.30 ರ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಸ್ಫೋಟದ ಬಗ್ಗೆ ಕರೆ ಬಂದಿದೆ,ತಕ್ಷಣ ಬಾಂಬ್ ನಿಷ್ಕ್ರಿಯ ದಳ, ಭಯೋತ್ಪಾದನಾ ನಿಗ್ರಹ ದಳ, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಧಾವಿಸಿ ತಪಾಸಣೆ ಮಾಡಿದರು.