ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಬಳಗ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಕುರಿತಾದ ಪೋಸ್ಟರ್ ಅನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬಿಡುಗಡೆಗೊಳಿಸಿದರು.
ಜೂನ್ 26 ರಂದು ಬೆಳಗ್ಗೆ ಹತ್ತರಿಂದ ಮಧ್ಯಾಹ್ನ ಎರಡು ಗಂಟೆವರೆಗೆ ನ್ಯೂ ಸಯಾಜಿರಾವ್ ರಸ್ತೆ, ಜೀವದರ ರಕ್ತನಿಧಿ ಕೇಂದ್ರದ ಆವರಣದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪೋಸ್ಟರ್ ಬಿಡುಗಡೆ ವೇಳೆ ಚಾಮುಂಡೇಶ್ವರಿ ಬಳಗದ ಮುಖ್ಯಸ್ಥರು ಹಾಗೂ ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್, ಡಿ.ಕೆ ಶಿವಕುಮಾರ್ ಅಭಿಮಾನಿಗಳ ಬಳಗದ ಪಾಂಡವಪುರ ದಿನೇಶ್, ರವಿಚಂದ್ರ, ಡಿಸಿಸಿ ಚಂದ್ರು, ಬೋಗಾದಿ ರವಿಚಂದ್ರ, ಉತ್ತನಹಳ್ಳಿ ಶಿವಣ್ಣ ಹಾಗೂ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.