ಡಿಸೆಂಬರ್ 29 ರಂದು ಅದ್ದೂರಿ ಕುವೆಂಪು ಜಯಂತಿ ಆಚರಣೆಗೆ ನಿರ್ಧಾರ

Spread the love

ಮೈಸೂರು: ಮೈಸೂರಿನ ಕಲಾಮಂದಿರದಲ್ಲಿ ಡಿಸೆಂಬರ್ 29 ರಂದು ಅದ್ದೂರಿಯಾಗಿ ವಿಶ್ವ ಮಾನವ ಕುವೆಂಪು ಜಯಂತಿ ಆಚರಿಸಲು ನಿರ್ಧರಿಸಲಾಗಿದೆ

ಮೈಸೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಜಿಲ್ಲಾಡಳಿತದ ವತಿಯಿಂದ ಇಂದು ಹಮ್ಮಿಕೊಂಡಿದ್ದ ವಿಶ್ವ ಮಾನವ ಕುವೆಂಪು ಅವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ ಡಿ ಸುದರ್ಶನ್ ಕಾರ್ಯಕ್ರಮದ ರೂಪ ರೇಷಗಳನ್ನು ತಿಳಿಸಿದರು.

ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಶಿವರಾಜ್ ರವರು ವಹಿಸಿದ್ದರು.

ಸಭೆಯಲ್ಲಿ ಕನ್ನಡ ಪರ ಹೋರಾಟಗಾರರಾದ ಬಿ ಎ. ಶಿವಶಂಕರ್, ಮೋಹನ್ ಕುಮಾರ್ ಗೌಡ, ಯಮುನಾ, ಭಾನು , ತೇಜೇಶ್ ಲೋಕೇಶ್ ಗೌಡ, ಅರವಿಂದ್ ಶರ್ಮಾ, ಹನುಮಂತಯ್ಯ ಸೇರಿದಂತೆ ಹಲವಾರು ಸಂಘಟನೆಗಳ ಮುಖ್ಯಸ್ಥರು ಭಾಗವಹಿಸಿದ್ದರು.