ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವ್ಯಕ್ತಿಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಲಾಗಿದ್ದು, ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕುವಂತೆ ಪೋಲಿಸ್ ಇಲಾಖೆಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಮನವಿ ಮಾಡಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವ್ಯಕ್ತಿಯ ತಲೆಯ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಕೆಲವು ತಿಂಗಳುಗಳಿಂದ ಮೈಸೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿತ್ತು,ಆದರೆ ಈಗ ಮತ್ತೆ ರೌಡಿ ಚಟುವಟಿಕೆ ಇಂದ ಜನರಲ್ಲಿ ಆತಂಕ ಉಂಟಾಗಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.
ತಕ್ಷಣ ಹತ್ಯೆ ಮಾಡಿರುವವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಇಂತಹವರನ್ನು ಗಡಿಪಾರು ಮಾಡಬೇಕು ಎಂದು ನಾಗಲಿಂಗಸ್ವಾಮಿ ಒತ್ತಾಯಿಸಿದ್ದಾರೆ.
