ದೀಪಾವಳಿ‌ ರಜೆ: ಕೆ ಎಸ್ ಆರ್ ಟಿ ಸಿ ಯಿಂದ2000 ಹೆಚ್ಚುವರಿ‌ ಬಸ್

Spread the love

ಬೆಂಗಳೂರು: ಈ ವಾರಾಂತ್ಯದಲ್ಲಿ ದೀಪಾವಳಿ ಮತ್ತು ನವೆಂಬರ್ 1 ಕನ್ನಡ ರಾಜ್ಯೋತ್ಸವ ಸೇರಿ ಸಾಲು ಸಾಲು ರಜೆಗಳು ಬಂದಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆ ಎಸ್ ಆರ್ ಟಿ ಸಿ 2000 ಬಸ್ ಗಳನ್ನು ಹೆಚ್ಚುವರಿಯಾಗಿ‌‌ ಓಡಿಸಲಿದೆ.

ಅಕ್ಟೋಬರ್ 30 ರಿಂದ ನವೆಂಬರ್ 1 ರವರೆಗೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಡಿಕೇರಿ, ಹಾಸನ ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ನಗರಗಳಿಗೂ ಮತ್ತು ನೆರೆ ರಾಜ್ಯಗಳಾದ ತಮಿಳುನಾಡು, ಕೇರಳ, ಮಧುರೈ, ಚೆನ್ನೈ ಮತ್ತಿತರ ರಾಜ್ಯಗಳಿಗೂ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಯಾಣಿಕರು ಈ ಟಿಕೆಟ್ ಬುಕಿಂಗ್ ಅನ್ನು www.ksrtc.karnataka. gov.in ವೆಬ್ಸೈಟ್ನಲ್ಲಿ ಬುಕಿಂಗ್ ಮಾಡಬಹುದು.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಬುಕಿಂಗ್ ಮಾಡಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗಿ ಬರುವ ಟಿಕೆಟ್‌ ಒಟ್ಟಿಗೆ ಬುಕ್ ಮಾಡಿದರೆ ವಾಪಸು‌ ಪ್ರಯಾಣ‌ ದರದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.