ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಲನುಭವಿಸಿದ್ದು ಆಪ್ ಗೆ ತೀವ್ರ ಮುಖಭಂಗ ವಾದಂತಾಗಿದೆ
ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್ ವಿರುದ್ಧ ಅರವಿಂದ್ ಕೇಜ್ರಿವಾಲ್ ಸೋಲನು ಭವಿಸಿದ್ದು, ದೆಹಲಿಗೆ ಹ್ಯಾಟ್ರಿಕ್ ಮುಖ್ಯಮಂತ್ರಿಯಾಗುವ ಕನಸು ನುಚ್ಚುನೂರಾಗಿದೆ.
ಕಳೆದ 2 ಚುನಾವಣೆಗಳಲ್ಲೂ ನವದೆಹಲಿ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಕೇಜ್ರಿವಾಲ್ ಸತತ 2 ಬಾರಿ ಸಿಎಂ ಆಗಿದ್ದರು. 3ನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಪರ್ವೇಶ್ ವಿರುದ್ಧ 3,000ಕ್ಕೂ ಅಧಿಕ ಮತಗಳ ಅಂತರದಿಂದ ಸೋತಿದ್ದಾರೆ.