(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ಮೇಗಲದೊಡ್ಡಿ, ಜಾಗೇರಿ ಸೇರಿದಂತೆ ಹನೂರು ವಿಧಾನಸಭಾ ಕ್ಷೇತ್ರದ ವಿವಿದೆಡೆ ಸುಮಾರು 75 ಲಕ್ಷ ರೂಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹನೂರು ಶಾಸಕ ಎಂ.ಆರ್.ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನದಡಿ ಮೇಗಲದೊಡ್ಡಿ ಗ್ರಾಮದಿಂದ ಪ್ರಕಾಶ್ ಪಾಳ್ಯದವರೆಗೆ ಕೊಳ್ಳೇಗಾಲ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಗ್ರಾಮದ ಮುಖ್ಯ ರಸ್ತೆಗೆ ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಡಾಂಬರು ರಸ್ತೆ, ಚರಂಡಿ, ಹಾಗೂ ಸೇತುವೆ
ನಿರ್ಮಾಣ ಕಾಮಗಾರಿ, ಜಾಗರಿಯ ಫಾಸ್ಕಲ್ ನಗರದ ಅಲ್ಪಸಂಖ್ಯಾತರ ಬೀದಿಯಲ್ಲಿ 15 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಹಾಗೂ ಬಂಡಳ್ಳಿ ಗ್ರಾಮದ ಅಲ್ಪಸಂಖ್ಯಾತರ ಬೀದಿಯಲ್ಲಿ ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಂ.ಆರ್.ಮಂಜುನಾಥ್, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಲ್ಪಸಂಖ್ಯಾತರ ಬೀದಿಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಗ್ರಾಮದಲ್ಲಿ ಸುಮಾರು 75 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಅಲ್ಪಸಂಖ್ಯಾತರಲ್ಲದೆ ಕ್ಷೇತ್ರದ ಎಲ್ಲಾ ಸಮುದಾಯದ ಜನರಿಗೂ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮೇಗಲದೊಡ್ಡಿ ಗ್ರಾಮಸ್ಥರು ಗ್ರಾಮದಲ್ಲಿ ಪುರುಷ ಹಾಗೂ ಮಹಿಳಾ ಸ್ವಸಹಾಯ ಸಂಘಗಳಿದ್ದು ಸಂಘದ ಸದಸ್ಯರು ಅಭಿವೃದ್ಧಿ ಚಿಂತನೆ ಕುರಿತು ಚರ್ಚಿಸಲು ಸಭಾಭವನವನ್ನು ನಿರ್ಮಿಸಿ ಕೊಡುವಂತೆ ಶಾಸಕರಿಗೆ ಲಿಖಿತ ಮನವಿ ಸಲ್ಲಿಸಿದರು.
ಈ ವೇಳೆ ಪ್ರಕಾಶ್ ಪಾಳ್ಯ ಚರ್ಚ್ ಫಾದರ್ ಸಿರಿಲ್ ಸಗಯ್ ರಾಜು, ಮುಖಂಡರಾದ ಬಂಡಳ್ಳಿ ಜೆಸ್ಸಿಂಗ್ ಪಾಷ, ವಿಜಯಕುಮಾರ್, ಸಿಂಗಾನಲ್ಲೂರು ರಾಜಣ್ಣ, ಆಂಥೋಣಿ ಚಿಕ್ಕಲ್ಲೂರು ಪಿ.ಡಿ.ಒ ಶಿವಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.