ಮಹಾರಾಷ್ಟ್ರಕ್ಕೆ ದೇವೇಂದ್ರ ಫಡ್ನವೀಸ್‌ ಸಿಎಂ

Spread the love

ಮುಂಬೈ: ಮಹಾರಾಷ್ಟ್ರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್‌ ಅವಿರೋಧವಾಗಿ ಆಯ್ಕೆಯಾಗಿದ್ದು,ಗುರುವಾರ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುರುವಾರ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಉನ್ನತ ಹುದ್ದೆಗೆ ಅಂತಿಮಗೊಳಿಸಲಾಯಿತು.

ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು.

ಬಿಜೆಪಿ ತನ್ನ ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಯಶಸ್ಸನ್ನು ಸಾಧಿಸಿದೆ. ರಾಜ್ಯದ 288 ವಿಫಧಾನಸಭಾ ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗೆದ್ದಿದೆ. ಇದು ಇದುವರೆಗಿನ ಅತ್ಯುತ್ತಮ ಸಾಧನೆ ಎಂದು ಹೇಳಬಹುದು.