
ಧಾರಾವಾಡ : ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ ಪಾಟೀಲ್ ಪುಟ್ಟಪ್ಪ ಸಭಾಭವನದಲ್ಲಿ ಧಾರವಾಡ ಜಿಲ್ಲಾ 17ನೇ ಸಾಹಿತ್ಯ ಸಮ್ಮೇಳನ
ವಿಶೇಷವಾಗಿ ನೆರವೇರಿತು.

ಈ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಎಸ್ ಬಾಲಾಜಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅವರನ್ನು ಸಮ್ಮೇಳನ ಸ್ವಾಗತ ಸಮಿತಿ ಸದಸ್ಯರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧಾರವಾಡ ಜಿಲ್ಲಾಧ್ಯಕ್ಷ ಡಾ ಲಿಂಗರಾಜ್ ಅಂಗಡಿ ಅಭಿನಂದಿಸಿದರು.

ಜಿಲ್ಲಾ ಕಾರ್ಯದರ್ಶಿ ಪ್ರೊ ಕೆ ಎಸ್ ಕೌಜಲಗಿ, ಸಾಹಿತಿ ಪ್ರೊ ಮಾಲತಿ ಪಟ್ಟಣಶೆಟ್ಟಿ, ಡಾ ಕೆ ಶರ್ಮ, ಉತ್ತರ ಕನ್ನಡ ಕಾಸಪ ಜಿಲ್ಲಾಧ್ಯಕ್ಷ ಬಿ ಏನ್ ವಾಸರೆ, ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಡಿ ಎಂ ಹಿರೇಮಠ, ಮಾಜಿ ಸಂಸ್ಥೆಯ ಸನದಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.