ಹುಣಸೂರು: ಹುಣಸೂರು ತಾಲೂಕಿನ ಧರ್ಮಪುರಿ ಸರ್ಕಾರಿ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ವತಿಯಿಂದ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.
ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಅವರ ನೇತೃತ್ವದಲ್ಲಿ ಧರ್ಮಪುರಿ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನಿಯನ್ನು ವಿತರಿಸಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಊರಿನ ಯಜಮಾನರು ಅಭಿಮಾನಿಗಳು ಹಾಜರಿದ್ದರು.
