ಧಾರವಾಡ: ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ
ಧಾರವಾಡ ಜಿಲ್ಲೆ, ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಕಾರಿನಲ್ಲಿದ್ದ ವಿಜಯಪುರ ಜಿಲ್ಲೆಯ ಚಡವಣ ತಾಲ್ಲೂಕಿನ ಬರಡೋಲಿ ಗ್ರಾಮದ ರಾಕೇಶ್ ಅನಿಲ್ಬೋಸ್ಲೆ(22), ಸಂದೀಪ ಗಣಪತಿ ಶಿಂಧೆ (33), ಬಸವನಬಾಗೇವಾಡಿ ತಾಲ್ಲೂಕಿನ ಮದಗಾನ್ ಗ್ರಾಮದ ಚಾಲಕ ಅಜಿತಪ್ರಭು ಅಲ್ಲಾಪುರ (38) ಹಾಗೂ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಶಿರವಾಳ ಗ್ರಾಮದ ಶ್ರುತಿ ನವೀನ್ಕುಮಾರ್ (28) ಮೃತಪಟ್ಟ ದುರ್ದೈವಿಗಳು.
ಬೆಳಗ್ಗೆ ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ನವಲಗುಂದ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
