ಮೈಸೂರು: ಮೈಸೂರಿನಲ್ಲಿ ಫೆಬ್ರವರಿ 6 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ವತಿಯಿಂದ
ವಿವಿಧ ಕಾರ್ಯಕಮಗಳನ್ನು ಹಮ್ಮಿಕೊಳ್ಳಲಾಗಿದೆ.
ಡಿಜಿಟಲ್ ಮೀಡಿಯಾ ಮಹತ್ವದ ಕಾರ್ಯಗಾರ, ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.
ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಅವರನ್ನು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷರಾದ ಸಿ ಬಸವರಾಜ್ ಅವರು ಆಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು.