ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ

Spread the love

ಮೈಸೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ ಮೈದಾನದಲ್ಲಿ ದಸರಾ ಪ್ರಯುಕ್ತ ಆಯೋಜಿಸಲಾಗಿದ್ದ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ಬಿ ಶಿವಾನಂದ ಅವರು ಬರೆದಿರುವ ಭಾನು ಮುಷ್ತಾಕ್ ಬದುಕು ಬರೆಹ ಕೃತಿಯನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮ ದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಎಂ ವಿ ವೆಂಕಟೇಶ್, ನಿರ್ದೇಶಕರಾದ ಕೆ.ಎಂ ಗಾಯಿತ್ರಿ, ಪುಸ್ತಕ ಮೇಳದ ಸಮನ್ವಯಾಧಿಕಾರಿ ಕೆ ಎನ್ ಮಲ್ಲಿಕಾರ್ಜುನ ಸ್ವಾಮಿ, ಡಾ. ನಂಜಯ್ಯ ಹೊಂಗನೂರು, ಪ್ರಾಧಿಕಾರದ ಆಡಳಿತಾಧಿಕಾರಿ ಕೆ. ಬಿ. ಕಿರಣ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.