ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ಸಚಿವ ಡಾ. ಯತೀಂದ್ರ ಉದ್ಘಾಟಿಸಿದರು.
ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ, ಸಾರ್ವಜನಿಕರ ಕುಂದುಕೊರತೆಗಳ ಶೀಘ್ರ ಪರಿಹಾರ ಹಾಗೂ ವಿವಿಧ ಇಲಾಖೆಗಳ ಆಡಳಿತಾತ್ಮಕ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ನೂತನ ಕಾರ್ಯಾಲಯವನ್ನು ತೆರೆಯಲಾಗಿದೆ ಎಂದು ಈ ವೇಳೆ ಸಚಿವರು ತಿಳಿಸಿದರು.
ಈ ನೂತನ ಕಾರ್ಯಾಲಯದ ಪ್ರಾರಂಭದಿಂದಾಗಿ ಜಿಲ್ಲೆಯ ನಾಗರಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಸುಲಭವಾಗಲಿದ್ದು, ವಿವಿಧ ಇಲಾಖೆಗಳ ನಡುವಿನ ಸಮನ್ವಯತೆ ಹೆಚ್ಚಿ ಅಭಿವೃದ್ಧಿ ಕಾಮಗಾರಿಗಳು ಚುರುಕುಗೊಳ್ಳಲಿವೆ ಎಂದು ಡಾ.ಯತೀಂದ್ರ ಅಭಿಪ್ರಾಯ ಪಟ್ಟರು.
ಈ ಸಂದರ್ಭದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಶಿವಕುಮಾರ್,ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಬೀರಿಹುಂಡಿ ಬಸವಣ್ಣ, ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಅಭಿಮಾನಿಗಳು ಹಾಜರಿದ್ದರು.
