ಮೈಸೂರು: ಏಳು ತಿಂಗಳ ಅವಧಿಯಲ್ಲಿ ಮೈಸೂರು ಜಿಲ್ಲಾ ಪೊಲೀಸರು 255 ಅಪರಾಧ ಪ್ರಕರಣಗಳನ್ನು ಭೇದಿಸಿ ಒಟ್ಟು 2,06,85,504 ಮೌಲ್ಯದ ಮಾಲು ವಶಪಡಿಸಿಕೊಂಡು ಸ್ವತ್ತುಗಳನ್ನು ವಾರಸುದಾರರಿಗೆ ನೀಡಲಾಯಿತು.

ಹಲವು ಪ್ರಕರಣಗಳಲ್ಲಿ ಮೈಸೂರು ಜಿಲ್ಲಾ ಪೊಲೀಸರು ವಶಪಡಿಸಿಕೊಂಡಿರುವ ಸ್ವತ್ತುಗಳನ್ನು ಹಿಂತಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಜ್ಯೋತಿನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ಕಳ್ಳತನವಾಗಿದ್ದ ಸ್ವತ್ತುಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು.
6 ಸುಲಿಗೆ, 6 ಸರಗಳ್ಳತನ, 25 ಮನೆ ಕಳ್ಳತನ, 6 ಸರ್ವೆಂಟ್ ಕಳ್ಳತನ, 67 ವಾಹನ ಕಳ್ಳತನ, 15 ಸಾಮಾನ್ಯ ಕಳ್ಳತನ, 5 ಜಾನುವಾರು ಕಳ್ಳತನ, 4 ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಪೊಲೀಸರು.
ಒಟ್ಟು 2,06,85,504 ಮೌಲ್ಯದ ಮಾಲು ವಶಕ್ಕೆ ಪಡೆದಿದ್ದರು.

ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಒಟ್ಟು 35 ಪ್ರಕರಣಗಳಲ್ಲಿ 2 ಕೆಜಿ 439 ಗ್ರಾಂ, 600 ಮಿಲಿಗ್ರಾಂ ಚಿನ್ನ ಮತ್ತು 4 ಕೆಜಿ 360 ಗ್ರಾಂ ಬೆಳ್ಳಿ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಒಟ್ಟ 18 ಪ್ರಕರಣಗಳಲ್ಲಿ 42,36,585 ರೂಪಾಯಿ ವಶ ಪಡಿಸಿಕೊಳ್ಳಲಾಗಿದೆ.
ಒಟ್ಟು 67 ಪ್ರಕರಣಗಳಲ್ಲಿ 5 ಕಾರು, 3 ಆಟೋ, 2 ಟ್ರಾಕ್ಟರ್, 3 ಟಿಪ್ಪರ್, 3 ರೋಡ್ ರೋಲರ್, 62 ಮೊಟಾರ್ ಬೈಕ್ ಗಳನ್ನ ವಶಪಡಿಸಿಕೊಳ್ಳ ಲಾಗಿದೆ ಎಂದು ಎಸ್ ಪಿ ವಿಷ್ಣುವರ್ಧನ್ ತಿಳಿಸಿದರು.
