ಬೆಂಗಳೂರು: ಜನರಿಗೆ ರಕ್ಷಣೆ ಕೊಡಬೇಕಾದ ಪೊಲೀಸರೆ ಅತ್ಯಾಚಾರದಂತಹ ಹೀನ ಕೃತ್ಯ ಎಸಗಿದರೆ ಜನ ಠಾಣೆಗಳಿಗೆ ಹೋಗುವುದಾದರು ಯಾವ ದೈರ್ಯದ ಮೇಲೆ?
ಇಂತಹ ಕೆಟ್ಟ ಆರೋಪ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ
ಅತ್ಯಾಚಾರ ಮತ್ತು ವಂಚನೆ ಆರೋಪ ಮಾಡಲಾಗಿದೆ.
ಮಹಿಳೆಯೊಬ್ಬರು ಈ ಕುರಿತು ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ,ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ.
ತನಗೆ ಹಣದ ಮೋಸವಾಗಿದೆ ಎಂದು ದೂರು ಕೊಡಲು ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ಇನ್ಸ್ಪೆಕ್ಟರ್ ವಿಶ್ವಾಸದಿಂದ ಮಾತನಾಡಿಸಿ ಸ್ನೇಹ ಬೆಳೆಸಿದ್ದಾರೆ. ನಂತರ ಮದುವೆಯಾಗುವುದಾಗಿ ನಂಬಿಸಿದ್ದಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಮನೆ ಕೊಡಿಸುತ್ತೇನೆ,ಬ್ಯೂಟಿ ಪಾರ್ಲರ್ ಮಾಡಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಕೆಲವು ಬಾರಿ ನಂಬಿಸಿ ತಮ್ಮ ಮನೆ ಹಾಗೂ ಹೋಟೆಲ್ ಗೆ ಕರೆಸಿಕೊಂಡು ಹೋಗಿದ್ದರು.ಆಗ ಕೆಲ ಬಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ಇನ್ಸ್ಪೆಕ್ಟರ್ ವಿರುದ್ಧ ದೂರು ನೀಡಿದ್ದಾರೆ.
ಹಿರಿಯ ಅಧಿಕಾರಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೆ,ದೂರು ನೀಡಿರುವ ಮಹಿಳೆಗೆ ನ್ಯಾಯ ಕೊಡಿಸುತ್ತಾರಾ ಕಾದು ನೋಡಬೇಕಿದೆ.