ಮಂಡ್ಯ,ಸೆ.1: ಗಣಪತಿ ವಿಸರ್ಜನೆ ವೇಳೆ ಡಿಜೆ ಸದ್ದಿಗೆ ನೃತ್ಯ ಮಾಡುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲೂಕು
ಜೊತ್ತನಪುರದಲ್ಲಿ ಈ ಘಟನೆ ನಡೆದಿದ್ದು
ಮಂಜುನಾಥ್ (55) ಎಂಬವರು ಮೃತಪಟ್ಟಿದ್ದಾರೆ.
ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯುತ್ತಿದ್ದಾಗ ಮಂಜುನಾಥ್ ಯುವಕರ ಜೊತೆ ಡಿಜೆ ಸದ್ದಿಗೆ ಡ್ಯಾನ್ಸ್ ಮಾಡುತ್ತಿದ್ದರು.
ಆಗಲೇ ದಿಢೀರ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ.
ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಎಲ್ಲರೂ ಮರುಗಿದ್ದಾರೆ.