ಯಳಂದೂರು: ನೂತನ ಮುಖ್ಯ
ಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪದಗ್ರಹಣ ಮಾಡಿದ ಹಿನ್ನಲೆಯಲ್ಲಿ
ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಮಾರಿಗುಡಿ ಆವರಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ವೇಳೆ ಕಾಂಗ್ರೇಸ್ ಮುಖಂಡ ಸಿದ್ದರಾಜ್ ಮಾತನಾಡಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಅವರು ರಾಜ್ಯದ ಅಭಿವೃದ್ಧಿಯಲ್ಲಿ ದೂರದೃಷ್ಟಿಯನ್ನು ಹೊಂದಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ ಮತ್ತು ಸಿದ್ದರಾಮಯ್ಯನವರ ಜೊತೆಗೆ ರಾಜಕಾರಣ ಮಾಡಿಕೊಂಡು ಬಂದಿರುವುದರಿಂದ ಡಿಕೆಶಿ ಕೂಡ ರಾಜ್ಯ ಮೆಚ್ಚಿದ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಉತ್ತಮ ಆಡಳಿತವನ್ನು ನೀಡಿ ರಾಜ್ಯವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಲಿ ಎಂದು ಹಾರೈಸಿದರು.
ರಾಜ್ಯದ ಉಪ ಮುಖ್ಯಮಂತ್ರಿಯಾಗಿ ದಲಿತ ನಾಯಕ ಡಾ ಜಿ ಪರಮೇಶ್ವರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ ಜೊತೆಗೆ ಸಚಿವರುಗಳು ಕುಡಾ ಪ್ರಮಾಣ ವಚನ ಸ್ವೀಕರಿಸಿದ್ದು ಕೆಸ್ತೂರು ಕಾಂಗ್ರೇಸ್ ಕಾರ್ಯಕರ್ತರ ವತಿಯಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಮಧು ಕೆಸ್ತೂರು ಮಾತನಾಡಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರವು ಸುಗಮವಾಗಿ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲಿ ನೂತನ ಸಚಿವರು ಕೂಡ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕರಾದ ಡಿ ನಾಗರಾಜ್, ನಾಗೇಶ್, ಮಾದೇಶ್ ಎಸ್, ಪ್ರಸಾದ್, ಮರಿಸ್ವಾಮಿ, ನಾಗಶೆಟ್ಟಿ,ಕೆ ರಂಗರಾಜ್, ಶಾಂತಮೂರ್ತಿ, ಕಟ್ನವಾಡಿ ರಾಜ್, ಪಿ ಮಹೇಶ್, ಮನೋಹರ್ ಮತ್ತಿತರರು ಹಾಜರಿದ್ದರು.
