ಮೈಸೂರು: ಕಲಬುರಗಿ ಪ್ರಾದೇಶಿಕ ಜಂಟಿ ನಿರ್ದೇಶಕರಾಗಿ ನೇಮಕವಾಗಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಪ್ರಾಂಶುಪಾಲ ಡಾ. ಅಬ್ದುಲ್ ರಹಿಮಾನ್ ಎಂ ಅವರನ್ನು ಅಭಿನಂದಿಸಲಾಯಿತು.
ಕಾಲೇಜಿನ ಅಧ್ಯಾಪಕರು ಅಧ್ಯಾಪಕೇತರರು ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರು.
ದಕ್ಷಿಣ ಕನ್ನಡ ಜಿಲ್ಲೆ,
ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ಕೆ. ಸೀಡಿ ಕುಂಹಿ, ಜೈನಾಬಿ ದಂಪತಿಯ ಪುತ್ರ ರಹಿಮಾನ್,1992 ರಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ಆಯ್ಕೆ ಆಗಿ ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಲ್ಲಿ ಸೇವೆ ಆರಂಭಿಸಿ, 30 ವರ್ಷದ ಸೇವೆ ಸಲ್ಲಿಸಿ ನಂತರ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿಗೆ 2022 ರಲ್ಲಿ ವರ್ಗಾವಣೆಯಾಗಿ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾಗಿ, ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
ಈಗ ಕಾಲೇಜು ಶಿಕ್ಷಣ ಇಲಾಖೆಯ ಕಲಬುರಗಿ ಪ್ರಾದೇಶಿಕ ಜಂಟಿ ನಿರ್ದೇಶಕರಾಗಿ ನೇಮಕವಾಗಿದ್ದಾರೆ. ಅವರು ಮಂಗಳವಾರ ಕಲಬುರಗಿ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಾಣಿಶಾಸ್ತ್ರ ಸಹ ಪ್ರಾಧ್ಯಾಪಕಿ ಲೀಲಾವತಿ ಎನ್. ಕೆ ಅವರು ಪ್ರಾಂಶುಪಾಲರಾಗಿ ಪ್ರಭಾರ ವಹಿಸಿಕೊಂಡರು.
