ಮೈಸೂರು: ಮೈಸೂರಿಗೆ ಆಗಮಿಸಿದ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರನ್ನು ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡರು ಪರಮೇಶ್ವರ್ ಅವರಿಗೆ ಹೂಗುಚ್ಛಗಳನ್ನು ನೀಡಿ ಶಾಲು ಹೊದಿಸಿ ಹಾರ ಹಾಕಿ ಜಯಘೋಶಗಳನ್ನು ಕೂಗುತ್ತಾ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್,ವೆಂಕಟೇಶ್,ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಶಿವಣ್ಣ, ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಓಬಿಸಿ ಅಧ್ಯಕ್ಷರಾದ ಎನ್ ಆರ್ ನಾಗೇಶ್, ಕಾರ್ಮಿಕ ವಿಭಾಗದ ಕಾರ್ಯದರ್ಶಿ ಫ್ಯಾನ್ಸಿಸ್ಸ್, ವಕೀಲ ಶಿವಪ್ರಸಾದ್,ಸೇವಾದಳ ಮೋಹನ್ ಹಾಜರಿದ್ದರು.