ಕಾಸರಗೂಡು: ಕನ್ನಡ ಜಾನಪದ ಕಲಾ ಸಂಪತ್ತು ಸಂರಕ್ಷಕ, ಕನ್ನಡ ಜಾನಪದ ಪರಿಷತ್ ಸ್ಥಾಪಕ ಡಾ. ಜಾನಪದ ಎಸ್ ಬಾಲಾಜಿ ಅವರು ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಡಾ.ಜಾನಪದ ಎಸ್ ಬಾಲಾಜಿ
ಅವರ ಜಾನಪದ ಹಾಗೂ ಯುವಜನ ಸೇವೆ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಕೇರಳ ರಾಜ್ಯ ಕಾಸರಗೋಡು ಕನ್ನಡ ಭವನದ ರಾಷ್ಟ್ರೀಯ ಪ್ರಶಸ್ತಿಯಾದ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಜನಸಿದ ಬಾಲಾಜಿಯವರು ಸುಮಾರು 32 ವರ್ಷಗಳಿಂದ ಜಾನಪದ ಹಾಗೂ ಯುವಜನ ಕ್ಷೇತ್ರದಲ್ಲಿ ಯಾವುದೇ ಅಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಕ್ಕಾಗಿ ಜುಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಪ್ರಶಸ್ತಿಯನ್ನು ಡಾ.ಬಾಲಾಜಿ ಅವರಿಗೆ ಪ್ರದಾನ ಮಾಡುತ್ತಿದ್ದೇವೆ ಎಂದು
ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
