ಮೈಸೂರು: ಮೈಸೂರಿನ ಡಾ.ರಾಣಿಪ್ರಭಾ ಅವರು ಕೆಎಸ್.ಎನ್ ಮಲ್ಲಿಗೆ ಕಂಪು ಪ್ರಶಸ್ತಿಗೆ
ಭಾಜನರಾಗಿದ್ದಾರೆ.
ಮೈಸೂರಿನ ಪುರಭವನದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ನೆನಪಿನಲ್ಲಿ ಆಯೋಜಿಸಿದ್ದ ಮಲ್ಲಿಗೆ ಕಂಪು ವಿಚಾರ ಕವಿಗೋಷ್ಠಿ, ಗೀತಗಾಯನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಡಾ.ರಾಣಿಪ್ರಭಾ ಅವರನ್ನು ಗೌರವಿಸಲಾಯಿತು.
ಆರೋಗ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕಳೆದ 3ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಡಾ. ಹೆಚ್.ಪಿ. ರಾಣಿಪ್ರಭಾ ಅವರಿಗೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಮಲ್ಲಿಗೆ ಕಂಪು ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಸಂಸ್ಥೆಯ ಅಧ್ಯಕ್ಷರಾದ ಗಂಗಾಧರ್ ಗಾಂಧಿ, ಪ್ರಧಾನ ಕಾರ್ಯದರ್ಶಿ ದಿನಕರ್ ಡಿ ಬಂಗೇರ, ಪ್ರಾಧ್ಯಾಪಕರಾದ ವಿಜಯಲಕ್ಷ್ಮಿ ಮಾನಪುರ ಮತ್ತಿತರರು ಹಾಜರಿದ್ದರು.