ಮೈಸೂರು: ಆಕಸ್ಮಿಕ ಘಟನೆಯೊಂದರಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಅವರನ್ನು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇತ್ತೀಚೆಗೆ ಆಕಸ್ಮಿಕ ಘಟನೆಯೊಂದರಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಶೀಘ್ರವಾಗಿ ಸಂಪೂರ್ಣ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮುಖಂಡರಾದ ಬಿ.ಜೆ. ವಿಜಯ್ ಕುಮಾರ್, ಗೋಪಿ, ಶಿವಣ್ಣ, ಜವರೇಗೌಡ, ರಾಜು,ಹುಣಸೂರು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷರಾದ ಕುನ್ನೇಗೌಡ, ಎಚ್ ಡಿ ಕೋಟೆ ತಾಲೂಕು ಅಧ್ಯಕ್ಷರಾದ ಆನಂದ್, ಪಿರಿಯಾಪಟ್ಟಣ ಸುನಿಲ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
