ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲೇ ಬರಬೇಕು ಎಂದು ಕಟ್ಟುನಿಟ್ಟಿನ ಡ್ರೆಸ್ ಕೋಡ್ ಜಾರಿ ಮಾಡಲಾಗಿದೆ.
ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ.
ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ, ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸಿಕೊಂಡು ಬರುವಂತಿಲ್ಲ.
ಶ್ರೀಕೃಷ್ಣನ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರಬೇಕು. ಮಾಡರ್ನ್ ಡ್ರೆಸ್ ಧರಿಸಿ ಬಂದರೆ ದರ್ಶನಕ್ಕೆ ಅವಕಾಶವಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ.
