ಬಾನು ಮುಷ್ತಾಕ್ ಅವರಿಂದ ದಸಾರ ಉದ್ಘಾಟನೆ ಮಾಡಿಸಿ:ತೇಜಸ್ವಿ ಮನವಿ

Spread the love

ಮೈಸೂರು,ಜು.1: 2025 ರ ದಸಾರ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಬೇಕೆಂದು ಸರ್ಕಾರಕ್ಕೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

ಕನ್ನಡದ ಪ್ರಮುಖ ಲೇಖಕಿ ಎಸ್. ಕೆ. ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್ ‘ ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿಯಾದ 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ.

ಲಂಡನ್ ನಲ್ಲಿ 2025 ಮೇ 20 ರಂದು ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೃತಿಯ ಅನುವಾದಕರಾದ ದೀಪ ಭಸ್ತಿ ಅವರೊಂದಿಗೆ ಬಾನು ಮುಷ್ತಾಕ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ಬಾನು ಅವರು ‘ ಎದೆಯ ಹಣತೆ ‘ ಶೀರ್ಷಿಕೆಯಡಿ ಬರೆದಿದ್ದ ಈ ಕೃತಿಯನ್ನು ದೀಪಾ ಭಸ್ತಿಯವರು ‘ ಹಾರ್ಟ್ ಲ್ಯಾಂಪ್ ‘ ಹೆಸರಿನಲ್ಲಿ ಅನುವಾದಿಸಿದ್ದಾರೆ.

ಬೂಕರ್ ಪ್ರಶಸ್ತಿಯು ಕನ್ನಡ ಸಾಹಿತ್ಯಕ್ಕೆ ಸಿಕ್ಕ ಗೆಲುವು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ 2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಯನ್ನು ಬಾನು ಮುಷ್ತಾಕ್ ಅವರಿಂದ ಮಾಡಿಸುವ ಮೂಲಕ ಗೌರವ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ.