ಮೈಸೂರು: ದಸರಾ ಆಚರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಕೆಲವು ಸಲಹೆ, ಸೂಚನೆ ನೀಡಿದರು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಮನೆ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿ ದಸರಾ ಆಚರಣೆ ಕುರಿತು ಕೆಲವು ಸೂಚನೆ ನೀಡಿದ ಸಚಿವರು, “ನಾಡಹಬ್ಬ ದಸರಾ-2025” ಪೋಸ್ಟರ್ ಬಿಡುಗಡೆ ಮಾಡಿದರು.
ಸಭೆಯಲ್ಲಿ ಪಶುಸಂಗೋಪನೆ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಶ್ರೀವತ್ಸ, ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು, ಡಿಸಿಪಿ ಸುಂದರ್ ರಾಜ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.