ಪರಮೇಶ್ವರ್‌ಗೆ ಇಡಿ ಶಾಕ್

Spread the love

ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ ಬೆಳ್ಳಂಬೆಳಿಗ್ಗೆ ಶಾಕ್‌ ನೀಡಿದೆ.

ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ‌

ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್‌ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜಿನ ಮೇಲೂ ಇಡಿ ದಾಳಿ ನಡೆದಿದೆ.

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಾಲ್ಕು ವರ್ಷದ ಹಿಂದೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.ಆ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಪರಮೇಶ್ವರ್ ಒಡೆತನದ ಸಂಸ್ಥೆ ಮೇಲೆ ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.