ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಕೊಡಗು: ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ‌ದ ಬೆನ್ನಲ್ಲೇ
ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ
ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ.

ಈತ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ.

ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.