ಮೈಸೂರು: ಮಾಜಿ ಮುಖ್ಯಮಂತ್ರಿ ಆರ್. ಗುಂಡುರಾವ್ ಅವರ 33ನೇ ಪುಣ್ಯಸ್ಮರಣೆ ಅಂಗವಾಗಿ ಕಲಾಮಂದಿರದ ಆವರಣದಲ್ಲಿ ಗುಂಡುರಾಯರ ನೆನೆಪಿನಂಗಳ ಕಾರ್ಯಕ್ರಮವನ್ನು ಗುಂಡುರಾವ್ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಳ್ಳಲಾಯಿತು.
ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಅವರು,ಗುಂಡುರಾಯರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅಪಾರ ಎಂದು ಹೇಳಿದರು.
ಬಡವರ್ಗದವರಿಗೆ ಸರ್ಕಾರಿ ಕೆಲಸ ನೀಡುವ ಮೂಲಕ ಅವರ ಜೀವನದ ಆರ್ಥಿಕ ಪರಿಸ್ಥಿತಿ ನಂದಾದೀಪವಾಗಿ ಲಕ್ಷಾಂತರ ಮಂದಿ ಸ್ವಾಭಿಮಾನಿಯಾಗಿ ದುಡಿಯಲು ಪ್ರೇರೇಪಿಸಿದವರು ಗುಂಡುರಾಯರು ಎಂದು ಬಣ್ಣಿಸಿದರು.
ಪೇಕಮಿಷನ್ ಜಾರಿಗೆ ತಂದರು ಮತ್ತು ರಾಜಧಾನಿಯೆಂದರೆ ಕೇಂದ್ರ ರೈಲ್ವೆ ನಿಲ್ದಾಣದ ಪಕ್ಕದಲ್ಲೇ ನಗರ ಮತ್ತು ಗ್ರಾಮೀಣ ಬಸ್ ನಿಲ್ದಾಣ ಸ್ಥಾಪಿಸುವ ಸಾರಿಗೆ ಯೋಜನೆ ಏಷ್ಯಾದಲ್ಲೆ ಪ್ರಪ್ರಥಮ ಮಹತ್ವದ ಪಡೆಯಿತು, ಕುಗ್ರಾಮದಲ್ಲಿರುವ ಬಡವರಿಗೆ ಉಚಿತ ವಿದ್ಯುತ್ ಯೋಜನೆ, ಬೆಂಗಳೂರಿಗೆ ಕಾವೇರಿ ನೀರು ಸಮರ್ಪಕ ಪೂರೈಕೆ, ಸೇರಿದಂತೆ ಸಾಕಷ್ಟು ಜನಪರ ಯೋಜನೆಗಳನ್ನು ಮುಖ್ಯಮಂತ್ರಿಯಾಗಿ ಗುಂಡೂರಾವ್ ಅವರು ಅನುಷ್ಠಾನಗೊಳಿಸಿದ್ದಾರೆ ಎಂದು ರಾಜೀವ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ ಎಸ್ ರಘು, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಲತಾ ಮೋಹನ್, ದಿನೇಶ್ ಗುಂಡೂರಾವ್ ಅಭಿಮಾನಿ ಬಳಗದ ಅಧ್ಯಕ್ಷ ವಿನಯ್ ಕಣಗಾಲ್, ರವಿತೇಜ, ರಾಕೇಶ್ , ಸುಚೇಂದ್ರ, ಲೋಕೇಶ್, ಪವನ್, ಎಸ್ ಎನ್ ರಾಜೇಶ್, ಹರೀಶ್ ನಾಯ್ಡು, ಮತ್ತಿತರರು ಹಾಜರಿದ್ದರು.
