ಆಹಾರ ಮಳಿಗೆ ವಸ್ತುಪ್ರದರ್ಶನ ಉದ್ಘಾಟನೆ

Spread the love

ಮೈಸೂರು: ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಕೆ.ಹೆಚ್. ಮುನಿಯಪ್ಪ ಉದ್ಘಾಟಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ ,ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿದೆ.

ಹಸಿವು ಮುಕ್ತ ಕರ್ನಾಟಕ ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿದೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಮುನಿಯಪ್ಪ, ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ನಡೆಸಲಾಗುತ್ತಿದ್ದು ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರನ್ನ ಬೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್
ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ,
ಪ್ರತಿಯೊಬ್ಬರಿಗೂ ಆಹಾರ ಬಹಳ ಮುಖ್ಯ, ಆಹಾರವನ್ನು ವ್ಯರ್ಥ ಮಾಡದೇ ಸಮರ್ಪಕವಾಗಿ ಬಳಸಿಕೊಳ್ಳಬೇಕು ಚಲ್ಲದಿರಿ ಅನ್ನ ಬಡವರಿಗದೇ ಚಿನ್ನ ಎಂದು ಹೇಳಿದರು.

ಅಂತ್ಯೋದಯ ಅಂದರೆ ಹಸಿವನ್ನು ಅಂತ್ಯ ಮಾಡುವುದು ಆಹಾರ ನಾಗರಿಕ ಸರಬರಾಜು ಸಚಿವರಾಗಿ ಮುನಿಯಪ್ಪ‌ ಅವರು ಬಿಪಿಎಲ್ ಅಂತ್ಯೋದಯ ಕುಟುಂಬಗಳಿಗೆ 10 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ತಂದರು. ಇದನ್ನು ಈಗ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಗೆ ಇಂದಿರಾ ಕಿಟ್ ಮೂಲಕ ಬೇಳೆ ಎಣ್ಣೆ ಅಂತಹ ಆಹಾರಧಾನ್ಯ ನೀಡಲು ಸಂಪುಟದಲ್ಲಿ ಅನುಮೋದನೆ ಪಡೆದಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್,
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಜಿಲ್ಲಾ ಜೆಂಟಿ ಉಪ ನಿರ್ದೇಶಕ ಮಂಟೇಸ್ವಾಮಿ, ತೂಕ ಮತ್ತು ಮಾಪನ‌ ಇಲಾಖೆ ಅಧಿಕಾರಿ ಮಹದೇವ ಸ್ವಾಮಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.