ಮೈಸೂರು: ಮೈಸೂರು ದಸರಾ ಚಿತ್ರಸಂತೆ-2026 ರ ಅಂಗವಾಗಿ ಬಟ್ಟೆಯ ಕೈ ಚೀಲಗಳ ಮೇಲೆ ಚಿತ್ರ ಬಿಡಿಸುವ ವಿಶೇಷ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು,ಎಲ್ಲರ ಗಮನ ಸೆಳೆಯಿತು.
ಸ್ಪರ್ಧೆಯಲ್ಲಿ 25ಕ್ಕೂ ಹೆಚ್ಚು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಪರಿಸರ ಸ್ನೇಹಿ ಬಟ್ಟೆ ಚೀಲಗಳ ಮೇಲೆ ಮಕ್ಕಳು ತಮ್ಮ ಕಲ್ಪನೆಯ ಚಿತ್ರಗಳನ್ನು ಬಿಡಿಸಿ ಮೆಚ್ಚುಗೆ ಪಡೆದರು.
ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಪ್ರಮಾಣಪತ್ರ ವಿತರಿಸಲಾಯಿತು. ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಚಿತ್ರಸಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
