ಮೈಸೂರು: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ದ್ವೈತ ಮತ ಪ್ರತಿಷ್ಠಾಪನಾಚಾರ್ಯ ಶ್ರೀ ಮಧ್ವಾಚಾರ್ಯರ ಜಯಂತಿ ಅಂಗವಾಗಿ ಮಧ್ವನವಮಿಯನ್ನು
ಹಮ್ಮಿಕೊಳ್ಳಲಾಗಿದೆ.
ಕುವೆಂಪುನಗರ,ನವಿಲು ರಸ್ತೆ, ಶ್ರೀ ಗುರು ರಾಘವೇಂದ್ರ ಸ್ವಾಮಿಗಳ
ಮಠದಲ್ಲಿ ಫೆಬ್ರವರಿ 6ರಂದು ಬೆಳಗ್ಗೆ 11.30 ಕ್ಕೆ ಮಧ್ವನವಮಿ ಆಚರಿಸಲಾಗುವುದು ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಚಾಲಕರಾದ ಸುಚಿಂದ್ರ ತಿಳಿಸಿದ್ದಾರೆ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡ ಮಾಜಿ ಅಧ್ಯಕ್ಷರಾದ ಎಚ್ ವಿ ರಾಜೀವ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಯುವ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಎಸ್ ಬಿ ವಾಸದೇವಮೂರ್ತಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.