ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಗಲಾಟೆ ನಡೆದು ಗಾಳಿಯಲ್ಲಿ ಗುಂಡು ಹಾರಿ, ಕಾಂಗ್ರೆಸ್ ಕಾರ್ಯಕರ್ತ ಸಾವಿಗೀಡಾದ ಘಟನೆ ಸಂಬಂಧ ಪೊಲೀಸರು ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು.
ಅದು ಸರಿ, ಈಗ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧವೂ ಎಫ್ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಮೇರೆ ಎಫ್ಐಆರ್ ದಾಖಲು ಮಾಡಲಾಗಿದೆ.
