ಮೈಸೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ (33) ಎಂಬವರು ವಾಸದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೃಷ್ಣಮೂರ್ತಿ ಮೈಕ್ರೋ ಫೈನಾನ್ಸ್ ನ ವಿವಿಧ ಸಂಘ ಸಂಸ್ಥೆಗಳಿಂದ 6 ಲಕ್ಷ ಸಾಲ ಪಡೆದಿದ್ದರು.
ಸಾಲ ಕಟ್ಟಲಾಗದೆ ಬೆದರಿ ಆತ್ಮತೆಗೆ ಶರಣಾಗಿದ್ದಾರೆ ಎಂಬ ದೂರು ಕೇಳಿ ಬಂದಿದೆ.
ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಕಿರುಕುಳ ನೀಡುತ್ತಿದ್ದ 5 ಮೈಕ್ರೋ ಫೈನಾನ್ಸ್ ಮೇಲೆ ಹುಲ್ಲಹಳ್ಳಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಮಲ್ಕುಂಡಿ ಗ್ರಾಮದ ರೈತ ಕೃಷ್ಣಮೂರ್ತಿ ಪತ್ನಿ ಲತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.