ತೆಲಂಗಾಣ: ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದ ಚಾರ್ಮಿನಾರ್ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 17 ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಎಂಟು ಮಕ್ಕಳು ಸೇರಿದ್ದಾರೆ
ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ತೆರಳಿ ಕಾರ್ಯಾಚರಣೆ ನಡೆಸಿವೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ, ಹೈದರ್‌ಗುಡ ಮತ್ತು ಡಿಆರ್‌ಡಿಒ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಈ ದುರಂತಕ್ಕೆ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ:ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು’ ಎಂದು ಪ್ರಧಾನಿಯವರ ಎಕ್ಸ್ ಪೋಸ್ಟ್ನಲ್ಲಿ ತಿಳಿಸಲಾಗಿದೆ.
ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.