ಮೈಸೂರು: ಪ್ರೀತಿ ನಿರಾಕರಿಸಿದ ಯುವತಿಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದ ಯುವಕ 8 ದಿನಗಳ ನಂತರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮಳವಳ್ಳಿ ತಾಲೂಕು ಹಲಗೂರು ಗ್ರಾಮದ ಚಂದನ್ (22) ಮೃತಪಟ್ಟ ದುರ್ದೈವಿ ಯುವಕ. ಈತ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಆರೋಪಿ ಚಂದನ್ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿಯನ್ನು ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ. ಯುವತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದ.
ಶೇ.80 ರಷ್ಟು ಸುಟ್ಟ ಗಾಯಗಳಾಗಿದ್ದ ಚಂದನ್ ಮೃತಪಟ್ಟಿದ್ದರೆ, ಶೇ.20 ರಷ್ಟು ಸುಟ್ಟ ಗಾಯಗಳಾಗಿರುವ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ
ಮೈಸೂರಿನ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.
