ಮೈಸೂರು: ಪಾಳು ಬಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಅಕ್ಕಪಕ್ಕದ ನಿವಾಸಗಳಿಗೂ ವ್ಯಾಪಿಸಿ ಆತಂಕ ಸೃಷ್ಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಪಟ್ಟಣದ ತ್ಯಾಗರಾಜ ಕಾಲೋನಿಯ ಎರಡನೇ ತಿರುವಿನಲ್ಲಿರುವ ಗೋವಿಂದರಾಜು ಎಂಬುವರಿಗೆ ಸೇರಿದ ಮನೆಗೆ ಬೆಂಕಿ ಬಿದ್ದಿದೆ.
ಹಲವು ವರ್ಷಗಳಿಂದ ಹೆಂಚಿನ ಮನೆ ಪಾಳು ಬಿದ್ದಿದೆ.ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಲಾರಂಭಿಸಿದೆ,ತಕ್ಷಣ ಎಚ್ಚೆತ್ತ ಮನೆಯವರು ಆತಂಕದಿಂದ ಹೊರಬಂದು ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯಾರೋ ಕಿಡಿಗೇಡಿಗಳು ಪಾಳು ಬಿದ್ದ ಮನೆಗೆ ಬೆಂಕಿ ಹಚ್ಚಿದ್ದಾರೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಠಾಣಾಧಿಕಾರಿ ಚೆಲುವರಾಜು ಸ್ಪಷ್ಟಪಡಿಸಿದ್ದಾರೆ.
ಅಗ್ನಿಶಾಮಕ ಠಾಣಾಧಿಕಾರಿ ಚೆಲುವರಾಜು ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಸಪ್ಪ, ರಘುನಂದನ್, ವಿಶ್ವನಾಥ್, ರಾಹುಲ್, ಮಂಜುನಾಥ್, ಪಿ. ಆರಾಧ್ಯ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.