ಮೈಸೂರು: ಕ್ಷುಲ್ಲಕ ರಾಜಕಾರಣ ಬಿಟ್ಟು ಜನರ ನೋವಿಗೆ ಸ್ಪಂದಿಸಿ,ಅತಿವೃಷ್ಠಿಯಿಂದ
ಎಲ್ಲೆಡೆ ನಷ್ಟವಾಗಿದೆ,ಮೊದಲು ಜಿಲ್ಲಾ ಉಸ್ತುವಾರಿ ಸಚಿವರನ್ನು ತಮ್ಮ ಜಿಲ್ಲೆಗಳಿಗೆ ಕಳುಹಿಸಿ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಚಾಟಿ ಬೀಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ,ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿ ಇತಿಹಾಸ, ಉತ್ಸವ, ಆರಾಧನೆ, ಸಂಪ್ರದಾಯ ಮೊದಲು ತಿಳಿಸಿ.
ಸಂಪ್ರದಾಯ ಅರಿತು ಅವರು ತಮ್ಮ ಕಾರ್ಯ ಮಾಡಲಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ದಸರಾ ಉದ್ಘಾಟಕರು ಈ ಸ್ಥಾನಕ್ಕೆ ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡುವುದಲ್ಲಾ,ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ಉದ್ಘಾಟಕರು ನಡೆದು ಕೊಳ್ಳಲಿ.
ಸರ್ಕಾರ ಯಾರನ್ನು ತೃಪ್ತಿಪಡಿಸಲು ಉದ್ಘಾಟಕರನ್ನು ಆಯ್ಕೆ ಮಾಡಿದೆಯೊ ಗೊತ್ತಿಲ್ಲ ಎಂದು ಹೇಳಿದರು.
ಉದ್ಘಾಟಕರಿಗೆ, ಸರಕಾರಕ್ಕೆ ಚಾಮುಂಡಿ ಬೆಟ್ಟದ ಶಿಷ್ಟಾಚಾರ, ಸಂಪ್ರದಾಯ ಪಾಲಿಸುವ ಬುದ್ದಿ ಕೊಡಲಿ ಎಂದು ಸೋಮಣ್ಣ ತಿಳಿಸಿದರು.