ಮಂಡ್ಯ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮದ್ದೂರಿನ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮವದರೊಂದಿಗೆ ಮಾತನಾಡಿದ ಸಿಎಂ,ಅಣೆಕಟ್ಟುಗಳ ಸುರಕ್ಷತೆ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಳ್ಳಲಾಗಿದೆ ನಮ್ಮದೇಶದ ಸೈನಿಕರ ಹೆಸರಲ್ಲಿ ಪೂಜೆ ನಡೆದಿದೆ ಎಂದು ಮಾಧ್ಯಮದ ವರ ಪ್ರಶ್ನೆಗೆ ಸಿಎಂ ಉತ್ತರಿಸಿದರು.
ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ,ಬಹಳಷ್ಟು ಮಂದಿಯನ್ನು ಗಡಿಪಾರು ಮಾಡಲಾಗಿದೆ.ಆದರೆ ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ ಎಂದು ಮುಖ್ಯ ಮಂತ್ರಿಗಳು ಸ್ಪಷ್ಟ ಪಡಿಸಿದರು.