ಮೈಸೂರು: ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಕೆ ಹೆಚ್ ಬಿ ಬಡಾವಣೆ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರದ ಪ್ರಯೋಜನವನ್ನು ನೂರಾರು ಮಂದಿ ಪಡೆದುಕೊಂಡರು.
ಲಯನ್ಸ್ ಕ್ಲಬ್ ಆಫ್ ಮೈಸೂರು, ಬೆಳವಾಡಿ ಮತ್ತು ಅಪೋಲೋ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯ ಆಸ್ಪತ್ರೆ ಸಹಯೋಗದ ದಲ್ಲಿ ಈ ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಶಿಬಿರವನ್ನು ಶ್ರೀ ವಿದ್ಯಾ ಕಾನ್ವೆಂಟ ಸಂಸ್ಥೆ ಯಲ್ಲಿ ಹಮ್ಮಿಕೊಳ್ಳಲಾಯಿತು.

ಶಿಬಿರಕ್ಕೆ ಶಿವಮೂರ್ತಿ ಅವರು ಸಂಘದ ಅಧ್ಯಕರಾದ ಕೆ.ನಾಗೇಶ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಸದಸ್ಯರು ಮಾಜಿ ಪದಾಧಿಕಾರಿಗಳು ಬಡಾವಣೆಯ ನಿವಾಸಿಗಳು ಭಾಗವಹಿಸಿದ್ದರು.