ಯಳಂದೂರು: ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳಸಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಬಿಳಿಗಿರಿರಂಗನ ಬೆಟ್ಟದ ಶ್ರೀಮೊರಾರ್ಜಿ ದೇಸಾಯಿ ವಸತಿ ಶಾಲೆಯ
ಪ್ರಾಂಶುಪಾಲರಾದ ಎಂ ಕುಮಾರಸ್ವಾಮಿ ಅವರು ತಿಳಿಸಿದರು.
ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ಶ್ರೀಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 80 ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ
ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯನ್ನು ಅಭಿವೃದ್ಧಿ ಸಾಮಾಜಿಕ ನ್ಯಾಯ, ಶಾಂತಿ, ಸೌಹಾರ್ದತೆ ಮತ್ತು ಸಮೃದ್ದಿಯಲ್ಲಿ ಮುಂಚೂಣಿಯನ್ನಾಗಿಸಲು ನಮ್ಮ ಹೊಣೆಗಾರಿಕೆಯನ್ನು ನಿಷ್ಠೆ ಯಿಂದ ನಿರ್ವಹಿಸೋಣ ಎಂದು ಪ್ರಾಂಶುಪಾಲರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಲಾಮಕ್ಕಳಿಂದ ಸಂಸ್ಕೃತಿ ಕಾರ್ಯಕ್ರಮ ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಶಿಕ್ಷಕರಾದ ಜ್ಞಾನೇಂದ್ರ ಸ್ವಾಮಿ, ನಿಲಯ ಪಾಲಕ ತ್ಯಾಗರಾಜು, ಶಿಕ್ಷಕರರಾದ ಸುನೀಲ್ ಕುಮಾರ್, ರಾಜಶೇಖರ್, ಸಿದ್ದಮುತ್ತು, ಚಿನ್ನ ಮುತ್ತು, ಪ್ರದೀಪ್, ಚೇತನ್, ರಿತೇಶ್ ಮತ್ತು ಶಾಲಾ ಮಕ್ಕಳು ಹಾಜರಿದ್ದರು.
