ಬೆಂಗಳೂರು: ಈ ಬಾರಿಯೂ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಅನುದಾನ ಮೀಸಲಿಟ್ಟಿದ್ದು, ಯುವನಿಧಿಗೆ ನಯಾಪೈಸೆಯನ್ನೂ ಮೀಸಲಿಟ್ಟಿಲ್ಲ.
ಶುಕ್ರವಾರ 17 ನೆ ಬಜೆಟ್ ಮಂಡಿಸಿದ ಸಿಎಂ,ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ, ಈ ಬಜೆಟ್ನಲ್ಲೂ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿರುವುದಾಗಿ ಪ್ರಕಟಿಸಿದರು.
ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ,
ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ರೂ. ಗೃಹ ಜ್ಯೋತಿ ಯೋಜನೆಗೆ 10,578 ಕೋಟಿ ರೂ. ಹಾಗೂ ಶಕ್ತಿ ಯೋಜನೆಗೆ 5,300 ಕೋಟಿ ಹಣ ಮೀಸಲಿಟ್ಟಿರುವುದಾಗಿ ತಿಳಿಸಿದರು.
