ಮೈಸೂರು: ಶೃಂಗೇರಿ ಶಾರದಾ ಪೀಠದ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ವಿದುಶೇಖರ ಭಾರತೀ ಸ್ವಾಮೀಜಿಗಳ 34ನೇ ವರ್ಧಂತಿ ಮಹೋತ್ಸವದ ಅಂಗವಾಗಿ, ಶ್ರೀರಾಂಪುರದಲ್ಲಿರುವ ಮೈತ್ರಿ ವಿಶೇಷ ಶಾಲೆಯ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಅಪೂರ್ವ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು.
ವಿಶೇಷ ಶಾಲೆಯ ಮಕ್ಕಳೊಂದಿಗೆ ಶ್ರೀಗಳ ವರ್ಧಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಅಪೂರ್ವ ಸ್ನೇಹ ಬಳಗ ಕೈಜೋಡಿಸಿತು.
ಈ ಸಂದರ್ಭದಲ್ಲಿ ಮಕ್ಕಳಿಗೆ ಅಗತ್ಯ ನೆರವು ಒದಗಿಸಿ ಅವರ ಕಲ್ಯಾಣ ಹಾಗೂ ಅಭಿವೃದ್ಧಿಗೆ ಸಹಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ದೂರ ರಾಜಣ್ಣ, ಜತ್ತಿ ಪ್ರಸಾದ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
