ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅರಮನೆಗೆ ಆಗಮಿಸಿ ವಿಶ್ರಾಂತಿ ಪಡೆಯುತ್ತಿವೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಜನಪ್ರತಿನುಧಿಗಳು,ಅಧಿಕಾರಿಗಳು ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಅಂಬಾವಿಲಾಸ ಅರಮನೆಗೆ ಸ್ವಾಗತಿಸಿದರು.
ಈ ವೇಳೆ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಶ್ರೀವತ್ಸ, ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು, ಡಿಸಿಪಿ ಸುಂದರ್ ರಾಜ್ ಮತ್ತಿತರರು ಭವ್ಯ ಅರಮನೆಗೆ ಗಜಪಡೆಯನ್ನು ಬರಮಾಡಿಕೊಂಡರು.