ಮೈಸೂರು: ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದ ಐದು ಮಂದಿಯನ್ನು ಜಿಲ್ಲೆಯ ಟಿ.ನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ಐವರನ್ನು ಬಂಧಿಸಿದ್ದಾರೆ.
ಜೂಜಾಟಕ್ಕೆ ಇಟ್ಟಿದ್ದ 2 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
